ಯೆಶಾಯ 44:9 - ಕನ್ನಡ ಸತ್ಯವೇದವು C.L. Bible (BSI)9 ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ವಿಗ್ರಹ ಕೆತ್ತುವವರೆಲ್ಲಾ ಮಟ್ಟಮಾಯವೇ; ಅವರ ಇಷ್ಟದ ಬೊಂಬೆಗಳು ಯಾತಕ್ಕೂ ಬಾರವು; ಬೊಂಬೆಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ; ನಾಚಿಕೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.