Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:1 - ಕನ್ನಡ ಸತ್ಯವೇದವು C.L. Bible (BSI)

1 ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಯಾವನ ಕೈಹಿಡಿದು ಯಾವನೆದುರಿಗೆ ಜನಾಂಗಗಳನ್ನು ತುಳಿದು ರಾಜರ ನಡುಕಟ್ಟನ್ನು ಬಿಚ್ಚಿ ಯಾವನ ಮುಂದೆ ಬಾಗಿಲುಹೆಬ್ಬಾಗಿಲುಗಳನ್ನು ತೆರೆದು ಮುಚ್ಚಲೀಸನೋ ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:1
31 ತಿಳಿವುಗಳ ಹೋಲಿಕೆ  

ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.


ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಸರ್ವೇಶ್ವರ ಇಂತೆನ್ನುತ್ತಾರೆ: ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ ಅದರ ಜನಸಾಮಾನ್ಯರನ್ನು, ಪದಾಧಿಕಾರಿಗಳನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಆ ಖಡ್ಗ.


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ತೆರೆಯಲಾಗಿವೆ ನದಿಯ ದ್ವಾರಗಳು ಕುಸಿದುಬಿದ್ದಿವೆ ಅರಮನೆಯ ಗೋಡೆಗಳು.


ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.


ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.


ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.


ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.


ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.


ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು;


ಕಣ್ಣೆತ್ತಿ ನೋಡಿದಾಗ ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿದ್ದು ಕಾಣಿಸಿತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.


“ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”


ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.


ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.


‘ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿ: ನಾನು ಬಾಬಿಲೋನಿನ ಅರಸನು ಹಾಗು ನನ್ನ ಸೇವಕನು ಆದ ನೆಬೂಕದ್ನೆಚ್ಚರನನ್ನು ನಾನು ಕರೆಯಿಸುವೆನು. ನಾನು ಮರೆಮಾಡಿಟ್ಟಿರುವ ಈ ಕಲ್ಲುಗಳ ಮೇಲೆಯೆ ಅವನು ತನ್ನ ಸಿಂಹಾಸನವನ್ನು ಹಾಕಿಸುವನು. ಈ ಕಲ್ಲುಗಳ ಮೇಲೆಯೆ ತನ್ನ ರತ್ನಗಂಬಳಿಯನ್ನು ಹಾಸಿಸುವನು.


ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.


ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು