Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:11
34 ತಿಳಿವುಗಳ ಹೋಲಿಕೆ  

ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.


ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.


ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.”


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


“ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಬಲಿಯನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯರ ಮುಖಂಡರು ಕೂಡಿಬಂದರು.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


‘ನೀನು ಹುಟ್ಟಿಸುವುದೇನು’ ಎಂದು ತಂದೆಯನು ಕೇಳುವವನಿಗೆ ಧಿಕ್ಕಾರ ! ‘ನೀನು ಹೆರುವುದೇನು’ ಎಂದು ತಾಯಿಯನು ಕೇಳುವವನಿಗೆ ಧಿಕ್ಕಾರ !


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು