Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:14 - ಕನ್ನಡ ಸತ್ಯವೇದವು C.L. Bible (BSI)

14 ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಈ ಮಾತನ್ನು ಕೇಳಿರಿ - ಐಗುಪ್ತದ ಆದಾಯವೂ ಕೂಷಿನ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ. ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು. ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ. ಬೇರೆ ದೇವರುಗಳೇ ಇಲ್ಲ’” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:14
41 ತಿಳಿವುಗಳ ಹೋಲಿಕೆ  

ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.


“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”


ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.


ಇಗೋ, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಮರದ ಕೊಂಬೆಗಳನ್ನು ದುಡುಮ್ಮನೆ ಬೀಳಿಸುವರು. ಉನ್ನತವಾದ ವೃಕ್ಷಗಳನ್ನು ಕಡಿದುಹಾಕುವರು. ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.


ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ II


ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ - ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.


ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.


ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ !


ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು