Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:17 - ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:17
37 ತಿಳಿವುಗಳ ಹೋಲಿಕೆ  

ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ.


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”


ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರ ಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ : “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.


ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.


ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು