Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:20 - ಕನ್ನಡ ಸತ್ಯವೇದವು C.L. Bible (BSI)

20 “ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:20
32 ತಿಳಿವುಗಳ ಹೋಲಿಕೆ  

ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”


ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.


ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ


ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II


ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.


ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.


ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.


ಹೇಗೆಂದರೆ, ‘ಸಿರಿಯಾ ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿವೆ; ಅಂತೆಯೇ ನಾನೂ ಅವುಗಳಿಗೆ ಬಲಿಸಮರ್ಪಿಸಿದರೆ ನನಗೂ ಜಯವಾಗುವುದು’, ಎಂದುಕೊಂಡನು; ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಬಲಿಕೊಟ್ಟನು. ಆದರೆ ಆ ದೇವತೆಗಳಿಂದ ಅವನಿಗೂ ಎಲ್ಲ ಇಸ್ರಯೇಲರಿಗೂ ಕೇಡು ಉಂಟಾಯಿತು.


ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ದೇವತೆಯನ್ನು ರೂಪಿಸುವವರು ಹಾಗೂ ನಿರರ್ಥಕ ಬೊಂಬೆಗಳನ್ನು ಎರಕಹೊಯ್ಯುವವರು ನಿಷ್ಪ್ರಯೋಜಕರು.


ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.


ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.


ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು