ಯೆಶಾಯ 45:23 - ಕನ್ನಡ ಸತ್ಯವೇದವು C.L. Bible (BSI)23 ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು. ಅಧ್ಯಾಯವನ್ನು ನೋಡಿ |