Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:25 - ಕನ್ನಡ ಸತ್ಯವೇದವು C.L. Bible (BSI)

25 ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:25
36 ತಿಳಿವುಗಳ ಹೋಲಿಕೆ  

ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’


ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಹರ್ಷಿಸಲಿ ಸಜ್ಜನರು ಪ್ರಭುವಿನಲಿ I ಆಶ್ರಯ ಪಡೆಯಲೀಗಲೆ ಆತನಲಿ I ನೇರ ಹೃದಯಿಗಳೆಲ್ಲರು ಹಿಗ್ಗಲಿ II


ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II


ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದ ನ್ಯಾಯನಿರ್ಣಯಗಳನು II


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


“ಹೆಚ್ಚಳಪಡುವವನು ಪ್ರಭುವಿನಲ್ಲೇ ಹೆಚ್ಚಳಪಡಲಿ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು