Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:6 - ಕನ್ನಡ ಸತ್ಯವೇದವು C.L. Bible (BSI)

6 ಇದ ಕಂಡು ತಿಳಿಯುವರೆಲ್ಲರು ಪೂರ್ವದಿಂದ ಪಶ್ಚಿಮದವರೆಗು : ನಿನ್ನ ವಿನಾ ದೇವರಾರು ಇಲ್ಲವೆಂದು ನಾನೇ ಸರ್ವೇಶ್ವರ ಮತ್ತಾರು ಅಲ್ಲವೆಂದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೂಡಲಿಂದ ಪಡುವಲ ತನಕ ಇರುವವರೆಲ್ಲರೂ ಇದನ್ನು ನೋಡಿ ನನ್ನ ವಿನಹ ಯಾರೂ ಇಲ್ಲ, ನಾನೇ ಯೆಹೋವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನೊಬ್ಬನೇ ದೇವರೆಂದು ಎಲ್ಲರೂ ತಿಳಿದುಕೊಳ್ಳಲಿ ಎಂದು ನಾನು ಇದನ್ನೆಲ್ಲಾ ಮಾಡುತ್ತಿದ್ದೇನೆ. ಪೂರ್ವದಿಂದ ಪಶ್ಚಿಮದ ತನಕ ಜನರೆಲ್ಲರೂ ನಾನೇ ದೇವರೆಂದೂ ನನ್ನ ಹೊರತು ಬೇರೆ ದೇವರಿಲ್ಲವೆಂದೂ ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪೂರ್ವದಿಂದ ಪಶ್ಚಿಮದವರೆಗೆ ಇರುವವರೆಲ್ಲರೂ ನನ್ನ ಹೊರತು ಮತ್ತೊಬ್ಬನು ಇಲ್ಲ, ನಾನೇ ಯೆಹೋವ ದೇವರು ಮತ್ತೊಬ್ಬ ದೇವರು ಇಲ್ಲ ಎಂದು ನನ್ನನ್ನು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:6
16 ತಿಳಿವುಗಳ ಹೋಲಿಕೆ  

“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು