Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:7 - ಕನ್ನಡ ಸತ್ಯವೇದವು C.L. Bible (BSI)

7 ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:7
39 ತಿಳಿವುಗಳ ಹೋಲಿಕೆ  

ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.


ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


“ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.


ನಿನ್ನ ಮೇಲೆ ಗಗನದಲಿ ಮಿನುಗುವ ಸಕಲ ಜ್ಯೋತಿಗಳನು ಮುಸುಕು ಮಾಡುವೆನು, ನಿನ್ನ ನಾಡಿನೊಳು ಕತ್ತಲನೊಡ್ಡುವೆನು.


ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಆ ಮೇಘಸ್ತಂಭವು ಈಜಿಪ್ಟಿನವರ ಪಡೆಗೂ ಇಸ್ರಯೇಲರ ಪಡೆಗೂ ನಡುವೆ ಬಂದು ಈಜಿಪ್ಟಿನವರಿಗೆ ಕತ್ತಲೆಯನ್ನುಂಟುಮಾಡಿತು; ಇಸ್ರಯೇಲರಿಗೆ ರಾತ್ರಿಯನ್ನು ಬೆಳಕಾಗಿಸಿತು. ಈ ಕಾರಣ ಆ ರಾತ್ರಿಯೆಲ್ಲಾ ಒಂದು ಪಡೆಯವರು ಇನ್ನೊಂದು ಪಡೆಯವರ ಬಳಿಗೆ ಬರಲಾಗಲಿಲ್ಲ.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?


ಕಾಳ ರಾತ್ರಿಯಾಯಿತು ಪ್ರಭು ಕಳಿಸಲು ಕತ್ತಲನು I ಈಜಿಪ್ಟರಾದರೊ ಇದಿರಿಸಿದರು ಆತನ ಮಾತನು II


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಒಳಿತು-ಕೇಡು ಸಂಭವಿಸುವುದು ಪರಾತ್ಪರನ ಮಾತಿನಿಂದ ಅಲ್ಲವೆ?


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;


ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು