Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:8 - ಕನ್ನಡ ಸತ್ಯವೇದವು C.L. Bible (BSI)

8 ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ವರ್ಷಿಸು, ಗಗನವು ಸುರಿಸಲಿ; ಭೂವಿುಯು ಒಡೆದು ರಕ್ಷಣೆಯನ್ನು ಮೊಳೆಯಿಸಿ ಅದರೊಡನೆ ನೀತಿಫಲವನ್ನು ಬೆಳೆಯಿಸಲಿ, ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ. ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ. ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:8
29 ತಿಳಿವುಗಳ ಹೋಲಿಕೆ  

ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ I ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ II


ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ನಡುಗಿತು ಪೊಡವಿ, ಕಂಪಿಸಿತು ಸೀನಾಯಿ, ದೇವ ಪ್ರತ್ಯಕ್ಷನಾದನೆಂದು I ಮಳೆಗರೆಯಿತು ಮೋಡಗಿರಿ, ಇಸ್ರಯೇಲ್ ದೇವ ಪ್ರತ್ಯಕ್ಷನಾದನೆಂದು II


ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.


“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು