ಯೆಶಾಯ 46:1 - ಕನ್ನಡ ಸತ್ಯವೇದವು C.L. Bible (BSI)1 ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೇಲ್ ದೇವತೆಯು ಬೊಗ್ಗಿದೆ, ನೆಬೋದೇವತೆಯು ಕುಗ್ಗಿದೆ, ಅವುಗಳ ಬೊಂಬೆಗಳು ದನ ಮೊದಲಾದವುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳನ್ನು ಬಳಲಿಸಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬೇಲ್ ಮತ್ತು ನೆಬೋ ನನ್ನ ಮುಂದೆ ಅಡ್ಡಬೀಳುವವು. ಒಡೆಯನು ಹೀಗೆನ್ನುತ್ತಾನೆ, “ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳೇ. ಜನರು ಭಾರವಾದ ವಿಗ್ರಹಗಳನ್ನು ಪಶುಗಳ ಮೇಲೆ ಹೊರಿಸುವರು. ಅವು ಕೇವಲ ಹೊತ್ತುಕೊಂಡು ಹೋಗಬೇಕಾದ ಹೊರೆಗಳಾಗಿವೆ. ಆ ಸುಳ್ಳುದೇವರುಗಳು ಜನರನ್ನು ದಣಿಸುವುದೊಂದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. ಅಧ್ಯಾಯವನ್ನು ನೋಡಿ |