ಯೆಶಾಯ 46:11 - ಕನ್ನಡ ಸತ್ಯವೇದವು C.L. Bible (BSI)11 ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೂಡಲಿಂದ ಹದ್ದು ಎರಗಲಿ ಎಂದು, ಅಂದರೆ ನನ್ನ ಸಂಕಲ್ಪವನ್ನು ನೆರವೇರಿಸತಕ್ಕವನು ದೂರದೇಶದಿಂದ ಬರಲಿ ಎಂದು ಕೂಗಿದ್ದೇನೆ; ನಾನು ನುಡಿದಿದ್ದೇನೆ, ಈಡೇರಿಸುವೆನು; ಆಲೋಚಿಸಿದ್ದೇನೆ, ಸಾಧಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು. ಅಧ್ಯಾಯವನ್ನು ನೋಡಿ |
ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?