Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:2 - ಕನ್ನಡ ಸತ್ಯವೇದವು C.L. Bible (BSI)

2 ಆ ಬೊಂಬೆಗಳೆಲ್ಲ ಬಗ್ಗಿ ಕುಗ್ಗಿಹೋಗಿವೆ ಭಾರವನ್ನು ನೀಗಿಸಲು ಅವು ನಿಶ್ಯಕ್ತವಾಗಿವೆ ತಾವೆ ಸೆರೆಮನೆ ಸೇರಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಒಟ್ಟಿಗೆ ಕುಗ್ಗಿ ಬೊಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸುಳ್ಳುದೇವರುಗಳೆಲ್ಲಾ ಅಡ್ಡಬೀಳುವವು. ಅವುಗಳೆಲ್ಲಾ ಬಿದ್ದುಹೋಗುವವು; ತಪ್ಪಿಸಿಕೊಳ್ಳಲು ಅವುಗಳಿಗೆ ಸಾಧ್ಯವಿಲ್ಲ. ಅವುಗಳನ್ನು ಸೆರೆಹಿಡಿದು ಒಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಟ್ಟಿಗೆ ಕುಗ್ಗಿ ಬಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ತಾವೇ ಸೆರೆಗೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:2
16 ತಿಳಿವುಗಳ ಹೋಲಿಕೆ  

“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.


ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.


ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ.


ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು.


ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.


ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡುವಾಗ ದಾಗೋನ್ ವಿಗ್ರಹ ಸರ್ವೇಶ್ವರನ ಮಂಜೂಷದ ಮುಂದೆ ಬೋರಲುಬಿದ್ದಿರುವುದನ್ನು ಕಂಡು ಅದನ್ನು ಪುನಃ ಅದರ ಸ್ಥಳದಲ್ಲಿಟ್ಟರು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು.


ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.


ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು