Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:5 - ಕನ್ನಡ ಸತ್ಯವೇದವು C.L. Bible (BSI)

5 ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, ಇಬ್ಬರೂ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನನ್ನನ್ನು ನೀವು ಬೇರೆಯವರಿಗೆ ಹೋಲಿಸುವಿರಾ? ಇಲ್ಲ. ಯಾರೂ ನನಗೆ ಸಮಾನರಲ್ಲ. ನನ್ನ ವಿಷಯವಾಗಿ ನೀವು ಸಂಪೂರ್ಣವಾಗಿ ಅರಿತುಕೊಳ್ಳುವುದಿಲ್ಲ. ನನ್ನಂತಿರಲು ಬೇರೆ ಯಾರಿಗಾದರೂ ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ? ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:5
13 ತಿಳಿವುಗಳ ಹೋಲಿಕೆ  

ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II


ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಪ್ರಭೂ, ಶಕ್ತಿಸ್ವರೂಪ, ನಿನ್ನ ಸುತ್ತುವರೆದಿದೆ ಸತ್ಯತೆ I ಸ್ವಾಮಿದೇವಾ, ಸರ್ವೇಶ್ವರಾ, ನಿನಗೆಲ್ಲಿಯದು ಸಮಾನತೆ? II


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು