ಯೆಶಾಯ 46:9 - ಕನ್ನಡ ಸತ್ಯವೇದವು C.L. Bible (BSI)9 ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ. ಅಧ್ಯಾಯವನ್ನು ನೋಡಿ |
ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?