Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:13 - ಕನ್ನಡ ಸತ್ಯವೇದವು C.L. Bible (BSI)

13 ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು ಇವರೆಲ್ಲರೂ, ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:13
13 ತಿಳಿವುಗಳ ಹೋಲಿಕೆ  

ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


ನಡೆದು ನಡೆದು ದಣಿದಿದ್ದರೂ ‘ಇನ್ನು ಪ್ರಯೋಜನವಿಲ್ಲ’ ಎಂದುಕೊಳ್ಳಲಿಲ್ಲ. ಹೊಸ ಚೈತನ್ಯವನ್ನು ತಂದುಕೊಂಡು ನಿಲ್ಲದೆ ಮುಂದುವರೆದಿರುವೆ.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು