Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:4 - ಕನ್ನಡ ಸತ್ಯವೇದವು C.L. Bible (BSI)

4 ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲ್ಯರ ಸದಮಲಸ್ವಾವಿು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “‘ದೇವರು ನಮ್ಮನ್ನು ರಕ್ಷಿಸುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು; ಇಸ್ರೇಲರ ಪರಿಶುದ್ಧನೆಂಬುದೇ ಆತನ ಹೆಸರು’ ಎಂದು ನನ್ನ ಜನರು ಹೇಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಮ್ಮ ವಿಮೋಚಕರಿಗೆ ಸೇನಾಧೀಶ್ವರರಾದ ಯೆಹೋವ ದೇವರು ಎಂಬುದೇ ಅವರ ಹೆಸರು. ಅವರೇ ಇಸ್ರಾಯೇಲಿನ ಪರಿಶುದ್ಧರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:4
12 ತಿಳಿವುಗಳ ಹೋಲಿಕೆ  

ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.”


ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು