Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:7 - ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನಾನು ಶಾಶ್ವತವಾದ ರಾಣಿ” ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಶಾಶ್ವತವಾದ ರಾಣಿ ಎಂದು ನೀನು ಅಂದುಕೊಂಡು ಅವರ ಹಿಂಸೆಗಳನ್ನು ಮನಸ್ಸಿಗೆ ತಾರದೆ, ಅವುಗಳಿಂದ ನಿನಗಾಗುವ ಪರಿಣಾಮವನ್ನು ನೆನಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ನಾನು ಶಾಶ್ವತವಾದ ರಾಣಿ’ ಎಂದು ನೀನು ಅಂದುಕೊಂಡದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೊಳ್ಳಲಿಲ್ಲ. ಅವರ ಅಂತ್ಯವನ್ನೂ ನೆನಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:7
18 ತಿಳಿವುಗಳ ಹೋಲಿಕೆ  

ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


“ಕಸ್ದೀಯ ನಗರಿಯೇ, ಕುಳಿತುಕೊ ಮೌನವಾಗಿ ಕತ್ತಲೆಯೊಳಗೆ ಇನ್ನು ಎನಿಸಿಕೊಳ್ಳೆ ರಾಣಿಯೆಂದು ರಾಜ್ಯಗಳಿಗೆ.”


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಹನ್ನೆರಡು ತಿಂಗಳು ಕಳೆದ ನಂತರ ಅವನು ಒಂದು ದಿನ ಬಾಬಿಲೋನಿನ ಅರಮನೆಯ ಮೇಲ್ಗಡೆ ತಿರುಗಾಡುತ್ತಿದ್ದನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’


“ನೆಬೂಕದ್ನೆಚ್ಚರನಾದ ನಾನು ನನ್ನ ಅರಮನೆಯಲ್ಲಿ ಸುಖವಾಗಿದ್ದೆ. ನನ್ನ ರಾಜಭವನದಲ್ಲಿ ನೆಮ್ಮದಿಯಿಂದ ಇದ್ದೆ.


ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು