Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:1
48 ತಿಳಿವುಗಳ ಹೋಲಿಕೆ  

‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


“ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I


ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.


ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


ಈ ಮಾತಿನ ಅರ್ಥವೇನೆಂದರೆ: ಶರೀರ ಸಂಬಂಧದಿಂದ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗುವುದಿಲ್ಲ; ದೈವವಾಗ್ದಾನದ ಪರಿಣಾಮವಾಗಿ ಹುಟ್ಟಿದವರೇ ನಿಜವಾಗಿಯೂ ಅಬ್ರಹಾಮನ ಸಂತತಿ ಎನಿಸಿಕೊಳ್ಳುವರು.


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರವನ್ನು ಆಧಾರವಾಗಿಟ್ಟುಕೊಂಡು ದೇವರಿಗೆ ಸೇರಿದವನೆಂದು ಕೊಚ್ಚಿಕೊಳ್ಳುತ್ತೀಯೆ;


ದೇವರು ಆತ್ಮಸ್ವರೂಪಿ, ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”


ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.


ನಿನ್ನ ಬುಗ್ಗೆ ಹೊರಗೆ ಹೋಗುವುದು ಸರಿಯೇ? ನಿನ್ನ ಕಾಲುವೆ ಬೀದಿಚೌಕಗಳಲ್ಲಿ ಹರಡಿಕೊಳ್ಳುವುದು ಹಿತವೇ?


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II


ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


“ನೀವು ನನಗೆ ಹೇಳಿದ ಈ ಮಾತುಗಳನ್ನು ಸರ್ವೇಶ್ವರಸ್ವಾಮಿ ಕೇಳಿ ನನಗೆ ಹೀಗೆಂದರು: ‘ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಅವರು ಹೇಳಿದ್ದು ಸರಿಯಾಗಿದೆ.


ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಅಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ ಅಭಿವೃದ್ಧಿಯಾಗುತ್ತಿದೆ ಅವರ ರಾಜ್ಯ.


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.


“ನಾನು ನಿಮಗೆ ವಿಧಿಸಿದ್ದನ್ನೆಲ್ಲ ಜಾಗರೂಕತೆಯಿಂದ ಅನುಸರಿಸಿ ನಡೆಯಿರಿ. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಬೇಡಿ, ಉಚ್ಚರಿಸಲೂ ಬೇಡಿ.


ಅವನಿಗೆ ದೇವರು, “ನಿನ್ನ ಹೆಸರು; ಯಕೋಬ ಅಲ್ಲವೇ? ಇನ್ನು ಮೇಲೆ ನೀನು ಯಕೋಬನೆನಿಸಿಕೊಳ್ಳದೆ 'ಇಸ್ರಯೇಲ್' ಎನಿಸಿಕೊಳ್ಳಬೇಕು” ಎಂದು ಹೇಳಿದರು. ಹೀಗೆ ಅವನ ಹೆಸರು ಇಸ್ರಯೇಲ್ ಆಯಿತು.


ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


ಮುನ್ನಡೆಯುತ್ತಿಹರಿದೋ ಕಿರಿಯ ಕುಲದ ಬೆನ್ಯಮೀನರು I ಗುಂಪಾಗಿ ಬರುತಿಹರು ಯೆಹೂದ್ಯ ಕುಲದ ಗುರುಹಿರಿಯರು I ಹಿಂಬಾಲಿಸುತಿಹರು ಜೆಬುಲೋನ್, ನಫ್ತಾಲಿ ಗೋತ್ರದವರು II


“ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ : ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು