Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:10 - ಕನ್ನಡ ಸತ್ಯವೇದವು C.L. Bible (BSI)

10 ಬೆಳ್ಳಿಯನು ಪುಟಕ್ಕೆ ಹಾಕಿದಂತಲ್ಲ; ನಿನ್ನನು ಸಂಕಟವೆಂಬ ಕೆಂಡಕ್ಕೆ ಹಾಕಿರುವೆ. ಶೋಧಿಸಿರುವೆನು, ಪರಿಶೋಧಿಸಿರುವೆನು ನಿನ್ನನು ನನಗಾಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ; ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇಗೋ, ನಾನು ನಿಮ್ಮನ್ನು ಶುದ್ಧೀಕರಿಸುತ್ತೇನೆ. ಜನರು ಬೆಳ್ಳಿಯನ್ನು ಬೆಂಕಿಯಿಂದ ಶುದ್ಧೀಕರಿಸುತ್ತಾರೆ. ಆದರೆ ನಾನು ನಿಮ್ಮನ್ನು ಸಂಕಟಗಳಿಂದ ಶುದ್ಧೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ನಿನ್ನನ್ನು ಪರಿಶೋಧಿಸಿದ್ದೇನೆ. ಆದರೆ ಬೆಳ್ಳಿಯಂತೆ ಅಲ್ಲ, ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:10
18 ತಿಳಿವುಗಳ ಹೋಲಿಕೆ  

ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಅವರು ನಿಮಗೆ ವಿರುದ್ಧ ಮಾಡಿದ ಎಲ್ಲಾ ಅಪರಾಧದ್ರೋಹಗಳನ್ನು ಕ್ಷಮಿಸಿರಿ; ಅವರನ್ನು ಸೆರೆಗೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸಿರಿ.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


“ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು