Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:13 - ಕನ್ನಡ ಸತ್ಯವೇದವು C.L. Bible (BSI)

13 ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಕೈ ಭೂವಿುಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಸಿದ್ಧವಾಗಿ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಭೂಮಿಯನ್ನು ನನ್ನ ಕೈಗಳಿಂದಲೇ ನಿರ್ಮಿಸಿದೆನು. ನನ್ನ ಬಲಗೈ ಆಕಾಶವನ್ನು ಉಂಟುಮಾಡಿತು. ನಾನು ಅವುಗಳನ್ನು ಕರೆದಾಗ ಅವು ನನ್ನ ಬಳಿಗೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಅವುಗಳನ್ನು ಕರೆಯಲು, ಅವು ಒಟ್ಟಾಗಿ ನಿಂತುಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:13
18 ತಿಳಿವುಗಳ ಹೋಲಿಕೆ  

ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II


ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ನಿಯಮಿಸಿಹನು ತಾರೆಗಳ ಸಂಖ್ಯೆಯನು I ಇಟ್ಟಿಹನು ಪ್ರತಿಯೊಂದಕೂ ಹೆಸರನು II


ದೇವರಂತೆ ಆಕಾಶಮಂಡಲವನು ನಿನ್ನಿಂದ ನಿರ್ಮಿಸಲಾದೀತೆ? ಎರಕ ಹೊಯ್ದು ಕನ್ನಡಿಯಂತೆ ಅದನು ಗಟ್ಟಿಮಾಡಲಾದೀತೆ?


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ?


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ಆತ ಭೂಮಿಯನ್ನು ನಿರ್ಮಿಸಿದ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ ವಿವೇಕದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು