Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:15 - ಕನ್ನಡ ಸತ್ಯವೇದವು C.L. Bible (BSI)

15 ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ; ಅವನ ಮಾರ್ಗವು ಸಾರ್ಥಕವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ಅವನನ್ನು ಕರೆಯುವುದಾಗಿ ಹೇಳಿದ್ದೇನೆ. ನಾನು ಅವನನ್ನು ಕರೆದುತರುವೆನು; ಅವನಿಗೆ ಜಯವನ್ನು ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನೇ, ನಾನಾಗಿಯೇ ಮಾತನಾಡಿದ್ದೇನೆ. ನಾನೇ ಅವನನ್ನು ಕರೆದದ್ದು; ಅವನನ್ನು ನಾನೇ ಬರಮಾಡಿದ್ದೇನೆ. ಅವನ ಮಾರ್ಗವು ಯಶಸ್ವಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:15
8 ತಿಳಿವುಗಳ ಹೋಲಿಕೆ  

ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ,


ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


ಸರ್ವೇಶ್ವರ ಹೀಗೆನ್ನುತ್ತಾರೆ: “ಮೆರಾಥಯಿಮ್ ನಾಡಿಗೂ ಪಕೋದಿನ ನಿವಾಸಿಗಳಿಗೂ ವಿರುದ್ಧ ದಂಡೆತ್ತಿಹೋಗಿ ಅವರನ್ನು ಸಂಹರಿಸು. ಆ ನಾಡನ್ನು ಪೂರ್ತಿಯಾಗಿ ಹಾಳುಮಾಡು. ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು