Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:16 - ಕನ್ನಡ ಸತ್ಯವೇದವು C.L. Bible (BSI)

16 ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಬಳಿಗೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, [ಭೂವಿುಯು] ಉಂಟಾದಂದಿನಿಂದ ಅಲ್ಲಿ ಇದ್ದೇನೆ. (ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಬಳಿಗೆ ಬಂದು ನನ್ನ ಮಾತು ಕೇಳಿರಿ! ಬಾಬಿಲೋನ್ ಒಂದು ದೇಶವಾಗಿ ಪರಿಣಮಿಸುವಾಗ ನಾನು ಅಲ್ಲಿದ್ದೆನು. ಆದಿಯಿಂದಲೇ ನಾನು ಸ್ವಷ್ಟವಾಗಿ ಹೇಳಿದ್ದೇನೆ. ಜನರಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದ್ದೇನೆ.” ಯೆಶಾಯನು ಹೇಳಿದ್ದೇನೆಂದರೆ: “ಈಗ ನನ್ನ ಒಡೆಯನಾದ ಯೆಹೋವನೂ ಆತನ ಆತ್ಮನೂ ಈ ವಿಷಯಗಳನ್ನು ತಿಳಿಸಲು ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ. “ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.” ಈಗ ಸಾರ್ವಭೌಮ ಯೆಹೋವ ದೇವರು ತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:16
13 ತಿಳಿವುಗಳ ಹೋಲಿಕೆ  

ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.


ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು