Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:17 - ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:17
32 ತಿಳಿವುಗಳ ಹೋಲಿಕೆ  

ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ದೇವರ ಶಕ್ತಿ ಉನ್ನತೋನ್ನತ ಯಾರಿಹನು ಅವನಂಥ ಬೋಧಕ?


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ಸಮುದ್ರದ ಮಧ್ಯೆ ದಾರಿಮಾಡಿದವನಾರೋ, ಭೋರ್ಗರೆವ ಜಲರಾಶಿಗಳಲ್ಲಿ ಮಾರ್ಗವೇರ್ಪಡಿಸಿದವನಾರೋ,


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ?


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.


ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು