ಯೆಶಾಯ 48:21 - ಕನ್ನಡ ಸತ್ಯವೇದವು C.L. Bible (BSI)21 ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು. ಅಧ್ಯಾಯವನ್ನು ನೋಡಿ |