Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:3 - ಕನ್ನಡ ಸತ್ಯವೇದವು C.L. Bible (BSI)

3 “ಕೇಳು, ಎಲೈ ಯಕೋಬ ಮನೆತನವೇ, ನಿನಗೆ ತಿಳಿಸಿದೆ ಈವರೆಗೆ ನಡೆದ ಸಂಗತಿಗಳನು ಪೂರ್ವದಲೇ. ಹೌದು ಪ್ರಕಟಿಸಿದೆ ನಾನು, ಹೊರಡಿಸಿದೆ ನನ್ನ ಬಾಯಿಂದಲೇ ಕೈಗೂಡುವಂತೆ ಮಾಡಿದೆ ನಾನವುಗಳನು ಕೂಡಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು, ಹೌದು, ನನ್ನ ಬಾಯಿಂದ ಹೊರಟವು, ಪ್ರಕಟಿಸಿದೆನು; ನಾನು ತಟ್ಟನೆ ನಡಿಸಲು ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಸಂಭವಿಸಲಿಕ್ಕಿರುವ ಸಂಗತಿಗಳ ಬಗ್ಗೆ ಬಹುಕಾಲದ ಹಿಂದೆಯೇ ನಿಮಗೆ ತಿಳಿಸಿದ್ದೆನು. ಫಕ್ಕನೇ ಅವು ನೆರವೇರುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತಿಳಿಸಿದ್ದೇನೆ. ನಾನು ತಟ್ಟನೆ ನಡೆಸಲು, ಅವು ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:3
16 ತಿಳಿವುಗಳ ಹೋಲಿಕೆ  

ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”


ಬನ್ನಿರಿ ಮುಂದಕ್ಕೆ ತಿಳಿಸಿ ಭವಿಷ್ಯತ್ತನು ನಮಗೆ. ವಿವರಿಸಿ ಗತಿಸಿದ ಘಟನೆಗಳು ಏನೇನೆಂದು; ಗ್ರಹಿಸುವೆವು ಅವುಗಳ ಪರಿಣಾಮವನ್ನು ಮನಸ್ಸಿಗೆ ತಂದು, ಇಲ್ಲವಾದರೆ ತಿಳಿಸಿ ನಮಗೆ ಸಂಭವಿಸಲಿರುವುದೇನೆಂದು.


ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು