ಯೆಶಾಯ 48:6 - ಕನ್ನಡ ಸತ್ಯವೇದವು C.L. Bible (BSI)6 ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 [ಆಗಲೇ] ಕೇಳಿದಿಯಲ್ಲಾ, [ಈಗ] ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ, ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತ ವಿಷಯಗಳನ್ನು, ನಿನಗೆ ಅರುಹುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದ್ದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು. ನೀವು ಅದನ್ನು ಒಪ್ಪಿಕೊಳ್ಳದೆ ಇದ್ದೀರೋ? “ಇಂದಿನಿಂದ ಹೊಸ ಸಂಗತಿಗಳನ್ನೂ, ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನೂ ನಿನಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |