Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:8 - ಕನ್ನಡ ಸತ್ಯವೇದವು C.L. Bible (BSI)

8 ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನು, ಆಗರ್ಭದ್ರೋಹಿ ಎನಿಸಿಕೊಂಡವನು ಎಂದು ನಾನು ತಿಳಿದುಕೊಂಡಿದ್ದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನಾನು ಇವುಗಳನ್ನು ತಿಳಿಸಿದ ಮೇಲೂ ನೀವು ನನ್ನ ಮಾತನ್ನು ಕೇಳದೆಹೋದಿರಿ. ನೀವು ನನ್ನಿಂದ ಏನೂ ಕಲಿಯಲಿಲ್ಲ. ನಾನು ಏನು ಹೇಳಿದರೂ ನೀವು ಕೇಳಲಿಲ್ಲ. ಪ್ರಾರಂಭದಿಂದಲೇ ನೀವು ನನಗೆ ವಿರುದ್ಧವಾಗುವಿರಿ ಎಂದು ನಾನು ತಿಳಿದಿದ್ದೆನು. ನೀವು ಹುಟ್ಟಿದಾಗಿನಿಂದಲೇ ನನಗೆ ವಿರುದ್ಧವಾಗಿ ದಂಗೆ ಎದ್ದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:8
33 ತಿಳಿವುಗಳ ಹೋಲಿಕೆ  

ದುರುಳರು ದಾರಿತಪ್ಪಿದವರು ಉದರದಿಂದಲೆ I ಸಟೆಯಾಡುವ ಅಕ್ರಮಿಗಳವರು ಹುಟ್ಟಿನಿಂದಲೆ II


ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.


ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”


“ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”


ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.


ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ಮತಭ್ರಷ್ಟರೇ, ಜ್ಞಾಪಕದಲ್ಲಿಡಿ ಇದನ್ನು ಧೈರ್ಯದಿಂದ ಒಪ್ಪಿಕೊಳ್ಳಿ ನಿಮ್ಮ ತಪ್ಪನ್ನು.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.


ಪುರಾತನ ಕಾಲದಲ್ಲಿ ಅಲ್ಲ, ಈಗ ನಡೆಯುತ್ತಿವೆ ಈ ಘಟನೆಗಳೆಲ್ಲ. ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತಲ್ಲಾ,’ ಎಂದು ನೀ ಕೊಚ್ಚಿಕೊಳ್ಳದಂತೆ, ನಾ ನಿನಗೆ ಮುಂತಿಳಿಸಲಿಲ್ಲ.


ಯಾರನ್ನು ಅಣಕಿಸಿ ಹಾಸ್ಯಮಾಡುತ್ತಿದ್ದೀರಿ? ಯಾರನ್ನು ನೋಡಿ ಬಾಯಿಕಿಸಿದು ನಾಲಿಗೆಯನ್ನು ಚಾಚುತ್ತೀರಿ?


ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು