Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:11 - ಕನ್ನಡ ಸತ್ಯವೇದವು C.L. Bible (BSI)

11 ಸಮದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು ಎತ್ತರಿಸುವೆನು ನನ್ನ ರಾಜಮಾರ್ಗಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಸೃಷ್ಟಿಯ ಬೆಟ್ಟಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನನ್ನ ಜನರಿಗೊಂದು ಮಾರ್ಗ ಸಿದ್ಧಮಾಡುವೆನು. ಬೆಟ್ಟವು ನೆಲದ ಮಟ್ಟಕ್ಕೆ ಇಳಿಯುವುದು; ತಗ್ಗು ಏರಿಸಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ, ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:11
12 ತಿಳಿವುಗಳ ಹೋಲಿಕೆ  

ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.


ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.


ಸರಿಯಾದ ದಾರಿಯಲಿ ನಡೆಸಿದನವರನು I ಸೇರಮಾಡಿದನು ಜನವಾಸಿಸುವ ಊರನು II


ಅಲೆದರು ಮರುಳುಗಾಡಿನಲಿ ದಾರಿಕಾಣದೆ I ಬಳಲಿದರು ಜನರಿರುವ ಊರು ಸಿಗದೆ II


ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.


ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು