Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:12 - ಕನ್ನಡ ಸತ್ಯವೇದವು C.L. Bible (BSI)

12 ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಇಗೋ, ದೂರದೇಶಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಉತ್ತರ, ಪಶ್ಚಿಮ ದಿಕ್ಕುಗಳಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ. ಈಜಿಪ್ಟಿನ ಅಸ್ವಾನಿನಿಂದ ಜನರು ನನ್ನ ಬಳಿಗೆ ಬರುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:12
24 ತಿಳಿವುಗಳ ಹೋಲಿಕೆ  

ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು