Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:14 - ಕನ್ನಡ ಸತ್ಯವೇದವು C.L. Bible (BSI)

14 ಜೆರುಸಲೇಮಿನ ಜನರಾದರೋ ಇಂತೆಂದರು : ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಚೀಯೋನ್ ನಗರಿಯಾದರೋ, “ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಚೀಯೋನ್ ನಗರಿಯಾದರೋ - ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನಲ್ಲಾ ಅಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಚೀಯೋನ್ ಎಂಬಾಕೆಯು, “ಯೆಹೋವ ದೇವರು ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನ್ನ ಯೆಹೋವ ದೇವರು ನನ್ನನ್ನು ಮರೆತುಬಿಟ್ಟಿದ್ದಾನಲ್ಲಾ!” ಎಂದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:14
14 ತಿಳಿವುಗಳ ಹೋಲಿಕೆ  

ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?


ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.


ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು :


“ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು