Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:16 - ಕನ್ನಡ ಸತ್ಯವೇದವು C.L. Bible (BSI)

16 ನೋಡು, ನಿನ್ನ ಚಿತ್ರ ಕೊರೆದಿದೆ ನನ್ನ ಅಂಗೈಗಳಲೆ ನಿನ್ನ ಪೌಳಿಗೋಡೆಗಳು ಇವೆ ಸದಾ ನನ್ನ ಕಣ್ಣೆದುರಿನಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿದ್ದೇನೆ; ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೋಡಿ, ನಿಮ್ಮ ಹೆಸರುಗಳನ್ನು ನಾನು ನನ್ನ ಅಂಗೈಗಳಲ್ಲಿ ಕೆತ್ತಿರುತ್ತೇನೆ. ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:16
12 ತಿಳಿವುಗಳ ಹೋಲಿಕೆ  

ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.


ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು : ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ನಿರ್ಮಿಸುವೆ ನಿನ್ನ ಗೋಪುರಗಳನು ಮಾಣಿಕ್ಯಗಳಿಂದ ನಿನ್ನ ಪೌಳಿಗೋಡೆಯನು ಅನರ್ಘ್ಯ ರತ್ನಗಳಿಂದ.


ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.


ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.


ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು