ಯೆಶಾಯ 49:18 - ಕನ್ನಡ ಸತ್ಯವೇದವು C.L. Bible (BSI)18 ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮೇಲಕ್ಕೆ ನೋಡು! ನಿನ್ನ ಸುತ್ತಲೂ ನೋಡು! ನಿನ್ನ ಮಕ್ಕಳೆಲ್ಲಾ ಒಟ್ಟಾಗಿ ಸೇರಿ ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿನ್ನ ಮಕ್ಕಳು ನೀನು ಕೊರಳಲ್ಲಿ ಧರಿಸುವ ಹಾರದಂತಿರುವರು. ಮದುಮಗಳು ಧರಿಸುವ ಕಂಠಹಾರದಂತೆ ನಿನ್ನ ಮಕ್ಕಳಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ. ಅಧ್ಯಾಯವನ್ನು ನೋಡಿ |