Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:22 - ಕನ್ನಡ ಸತ್ಯವೇದವು C.L. Bible (BSI)

22 ಇಂತೆನ್ನುವರು ಸ್ವಾಮಿ ಸರ್ವೇಶ್ವರ : ಇದೋ, ಕೈಸನ್ನೆಮಾಡುವೆ ಜನಾಂಗಗಳಿಗೆ ನನ್ನ ಧ್ವಜವನ್ನೆತ್ತುವೆ ದೇಶಾಂತರಗಳವರೆಗೆ ಬರುವರವರು ನಿನ್ನ ಕುವರರನು ಅಪ್ಪಿಕೊಂಡು ಎದೆಗೆ ಕರೆತರುವರು ನಿನ್ನ ಕುವರಿಯರನು ಹೆಗಲಮೇಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ, “ಇಗೋ, ನಾನು ರಾಷ್ಟ್ರಗಳ ಕಡೆಗೆ ಕೈಯೆತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಪುತ್ರರನ್ನು ಕೈಹಿಡಿದು ತರುವರು. ನಿನ್ನ ಪುತ್ರಿಯರನ್ನು ಹೆಗಲ ಮೇಲೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:22
20 ತಿಳಿವುಗಳ ಹೋಲಿಕೆ  

ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ I ಆತನ ಗುಣಗಾನವಿರುವುದು ಆ ಜೆರುಸಲೇಮಿನಲಿ II


ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,


ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.


ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


“ನಾನಾದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು