Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:26 - ಕನ್ನಡ ಸತ್ಯವೇದವು C.L. Bible (BSI)

26 ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು. ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ಸ್ವರಕ್ತವನ್ನೇ ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬ್ಯರ ಶೂರನೂ ಎಂದು ನರಮಾನವರೆಲ್ಲರಿಗೂ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:26
31 ತಿಳಿವುಗಳ ಹೋಲಿಕೆ  

ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


ಇದ ಕಂಡು ತಿಳಿಯುವರೆಲ್ಲರು ಪೂರ್ವದಿಂದ ಪಶ್ಚಿಮದವರೆಗು : ನಿನ್ನ ವಿನಾ ದೇವರಾರು ಇಲ್ಲವೆಂದು ನಾನೇ ಸರ್ವೇಶ್ವರ ಮತ್ತಾರು ಅಲ್ಲವೆಂದು;


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.


ನೆಲೆನೀಡಿ ಮೋವಾಬ್ ನಾಡಿನಿಂದ ವಲಸೆಬಂದಿಹ ನಮಗೆ, ವಿನಾಶಕರಿಗೆ ವಶವಾಗದಂತೆ ಆಶ್ರಯ ನೀಡಿ ನಮಗೆ, ನಾಡಿನಿಂದ ನಿರ್ಮೂಲವಾಗುವರು ವಿಧ್ವಂಸಕರು, ನಿಂತುಹೋಗುವುವು ನಾಶವಿನಾಶಗಳು, ಅಳಿದುಹೋಗುವರು ತುಳಿದು ಹಾಳುಮಾಡುವವರು.


ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು