Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:4 - ಕನ್ನಡ ಸತ್ಯವೇದವು C.L. Bible (BSI)

4 ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ನಾನು - ನನ್ನ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ವ್ರಯಮಾಡಿದ್ದು ಹಾಳೇ, ಬರಿ ಗಾಳಿಯೇ; ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ, ನನಗೆ ಲಾಭವು ನನ್ನ ದೇವರಿಂದಲೇ ಆಗುವದು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು “ನಾನು ಕಷ್ಟಪಟ್ಟು ಮಾಡಿದ ಕಾರ್ಯಗಳೆಲ್ಲವೂ ನಿಷ್ಪ್ರಯೋಜನವಾದವು. ನಾನು ನನ್ನನ್ನೇ ಸವೆಯಿಸಿದೆನು. ಆದರೆ ಪ್ರಯೋಜನವಾದದ್ದನ್ನು ನಾನು ಮಾಡಲಿಲ್ಲ. ನಾನು ನನ್ನ ಶಕ್ತಿಯನ್ನೆಲ್ಲಾ ಉಪಯೋಗಿಸಿದರೂ ಏನೂ ಮಾಡಲಾಗಲಿಲ್ಲ. ಆದ್ದರಿಂದ ನನಗೆ ಮಾಡಬೇಕಾದುದನ್ನು ಯೆಹೋವನೇ ತೀರ್ಮಾನಿಸಲಿ. ನನಗೆ ದೊರಕಬೇಕಾದ ಬಹುಮಾನವನ್ನು ದೇವರೇ ತೀರ್ಮಾನಿಸಲಿ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:4
28 ತಿಳಿವುಗಳ ಹೋಲಿಕೆ  

ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ಹೌದು, ಉದ್ಧಾರದ ಮಾರ್ಗದಲ್ಲಿರುವವರಿಗೂ ವಿನಾಶಮಾರ್ಗದಲ್ಲಿರುವವರಿಗೂ ಕ್ರಿಸ್ತಯೇಸುವೇ ದೇವರಿಗರ್ಪಿಸಿದ ಪರಿಮಳದಂತೆ ನಾವು ಇದ್ದೇವೆ.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.


ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.


ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.


ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.


ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು