Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:5 - ಕನ್ನಡ ಸತ್ಯವೇದವು C.L. Bible (BSI)

5 ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬನ್ನು ತನಗೆ ಸೇರಿಸಿಕೊಳ್ಳಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಯೆಹೋವನ ಸೇವಕನಾಗಿರಬೇಕೆಂದು ಆತನು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿಯೇ ರೂಪಿಸಿದನು. ಇಸ್ರೇಲರನ್ನೂ ಯಾಕೋಬನನ್ನೂ ಆತನ ಬಳಿಗೆ ಮತ್ತೆ ಕರೆದುಕೊಂಡು ಬರಲು ಆತನು ನನ್ನನ್ನು ರೂಪಿಸಿದನು. ಯೆಹೋವನು ನನ್ನನ್ನು ಸನ್ಮಾನಿಸುವನು. ನಾನು ಆತನಿಂದ ಬಲವನ್ನು ಹೊಂದುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:5
30 ತಿಳಿವುಗಳ ಹೋಲಿಕೆ  

ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.


ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು