Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:10 - ಕನ್ನಡ ಸತ್ಯವೇದವು C.L. Bible (BSI)

10 ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಎಂಟು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ನೂರೆಂಬತ್ತು ಲೀಟರ್ ಬೀಜಬಿತ್ತಿದರೆ, ಕೇವಲ ಹದಿನೆಂಟು ಲೀಟರ್ ಧಾನ್ಯ ಮಾತ್ರ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಹತ್ತು ಎಕರೆ ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ ಬೀಜದಿಂದ ಕಡಿಮೆ ದವಸವು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಕಂದರೆ ಹತ್ತು ಎಕರೆ ಬಾಗಾಯಿತು ಭೂವಿುಯು ನಾಲ್ಕು ಕೊಳಗದಷ್ಟೇ ದ್ರಾಕ್ಷಾರಸವನ್ನೀಯುವದು, ಬಿತ್ತಿದ ಒಂದು ಕಂಡುಗ ಬೀಜದಿಂದ ಇಕ್ಕಳ ದವಸವು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:10
13 ತಿಳಿವುಗಳ ಹೋಲಿಕೆ  

ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ಆ ಕಾಲದಲ್ಲಿ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೆ? ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಸೇರು ಮಾತ್ರ ದೊರೆಯುತ್ತಿತ್ತಷ್ಟೆ.


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ಬೀಜಗಳು ಹೆಂಟೆಗಳ ಅಡಿಯಲ್ಲೇ ಒಣಗುತ್ತಿವೆ; ಉಗ್ರಾಣಗಳು ಬರಿದಾಗಿವೆ; ದವಸಧಾನ್ಯದ ಕೊರತೆಯಿಂದ ಕಣಜಗಳು ಕುಸಿದುಬಿದ್ದಿವೆ.


“ಯಾವನಾದರು ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದಕ್ಕೆ ಬಿತ್ತನೆಬೀಜ ಎಷ್ಟು ಬೇಕಾಗುತ್ತದೆ ಎಂಬುದರ ಆಧಾರದ ಮೇಲೆ ನೀವು ಅದರ ಬೆಲೆಯನ್ನು ನಿರ್ಣಯಿಸಬೇಕು. ಇಪ್ಪತ್ತು ಕಿಲೋಗ್ರಾಂ ಜವೆಗೋಧಿಯನ್ನು ಬಿತ್ತಬಹುದಾದಂಥ ಭೂಮಿಗೆ ಐವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕಾಗುವುದು.


“ಹೊಲದಲ್ಲಿ ನೀವು ಎಷ್ಟು ಬೀಜ ಬಿತ್ತಿದರೂ ಮಿಡತೆಯ ದಂಡುಬಂದು ಅದನ್ನು ತಿಂದುಬಿಡುವುದು; ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು;


ದ್ರಾಕ್ಷಾವ್ಯವಸಾಯವನ್ನು ನೀವು ಎಷ್ಟುಮಾಡಿದರೂ ಅದರ ಹಣ್ಣುಗಳನ್ನು ಹುಳುಗಳೇ ತಿಂದುಹಾಕುವುವು; ನೀವು ಕೂಡಿಸಿಕೊಳ್ಳಲು ನಿಮಗೆ ಬಿಡವು. ಅವುಗಳ ರಸವನ್ನು ರುಚಿನೋಡಗೊಡಿಸವು.


ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದರುಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ, ಅರಮನೆ ಪಾಳುಬಿದ್ದಿದೆ.


ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.


ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು