Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:12 - ಕನ್ನಡ ಸತ್ಯವೇದವು C.L. Bible (BSI)

12 ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ಕುಡಿಯುತ್ತಾ ಹಾರ್ಪ್‌ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:12
20 ತಿಳಿವುಗಳ ಹೋಲಿಕೆ  

ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II


ದೇವರ ಮಾರ್ಗಗಳೆಲ್ಲವನು ಅವರು ಅಲಕ್ಷ್ಯಮಾಡಿದರು ಆತನಿಗೆ ವಿಧೇಯರಾಗದೆ ತಿರುಗಿಬಿದ್ದರು.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


ನನಗೆ ಏನೂ ಹೇಳದೆ ವಂಚಿಸಿ ಏಕೆ ಓಡಿಬಂದೆ? ನನಗೆ ತಿಳಿಸಿದ್ದರೆ ಸಂಗೀತ ಸಂಭ್ರಮದೊಂದಿಗೆ, ತಾಳಮೇಳ ವಾದ್ಯಗಳೊಂದಿಗೆ ನಿನ್ನನ್ನು ಸಾಗಕಳುಹಿಸುತ್ತಿದ್ದೆ.


ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದವನ್ನು ಹೊಮ್ಮಿಸುತ್ತವೆ; ಅವುಗಳ ಸ್ವರಗಳಲ್ಲಿ ಯಾವ ವ್ಯತ್ಯಾಸವೂ ಕಂಡುಬರದಿದ್ದರೆ, ನುಡಿಸಿದ್ದು, ಬಾಜಿಸಿದ್ದು ಇಂತಹುದೇ ರಾಗವೆಂದು ತಿಳಿಯುವುದು ಹೇಗೆ?


ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.


ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು ಕೆಟ್ಟದು ಇವುಗಳ ಭೇದ ನನಗಿನ್ನು ತಿಳಿಯುವುದೇ? ನಿಮ್ಮ ಸೇವಕನಾದ ನನಗೆ ಇನ್ನು ಅನ್ನಪಾನಗಳ ರುಚಿ ಗೊತ್ತಾಗುವುದೇ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೆಯೇ? ನಾನು ನನ್ನ ಒಡೆಯರಾದ ಅರಸರಿಗೆ ಸುಮ್ಮನೆ ಏಕೆ ಹೊರೆಯಾಗಿರಬೇಕು?


ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.


ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು