Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:14 - ಕನ್ನಡ ಸತ್ಯವೇದವು C.L. Bible (BSI)

14 ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಅವರು ಸತ್ತು ಪಾತಾಳಕ್ಕೆ ಇಳಿದುಹೋಗುವರು. ಪಾತಾಳವು ತನ್ನ ಬಾಯನ್ನು ಅಗಲವಾಗಿ ತೆರೆದು ಅವರನ್ನೆಲ್ಲಾ ನುಂಗಿಬಿಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:14
26 ತಿಳಿವುಗಳ ಹೋಲಿಕೆ  

“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ಅವು ಯಾವುದೆಂದರೆ: ಪಾತಾಳ, ಹೆರದ ಗರ್ಭ, ನೀರಿಗಾಗಿ ಹಾತೊರೆಯುವ ಭೂಮಿ, ‘ಸಾಕಾಯಿತು’ ಎನ್ನದ ಬೆಂಕಿ.


“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.


ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.


ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.


ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.


ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.


“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು