Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:2 - ಕನ್ನಡ ಸತ್ಯವೇದವು C.L. Bible (BSI)

2 ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಭೂಮಿಯನ್ನು ಅಗೆದು ಹಸನು ಮಾಡಿದನು; ಅದರಲ್ಲಿ ಉತ್ತಮವಾದ ದ್ರಾಕ್ಷಿಯ ಸಸಿಗಳನ್ನು ನೆಟ್ಟನು. ತೋಟದ ಮಧ್ಯದಲ್ಲಿ ಒಂದು ಗೋಪುರವನ್ನು ಕಟ್ಟಿಸಿ ದ್ರಾಕ್ಷಿಯ ತೊಟ್ಟಿಯನ್ನು ಮಾಡಿಸಿದನು. ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡತೊಡಗಿದನು. ಆದರೆ ಅದು ಹೊಲಸು ಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:2
31 ತಿಳಿವುಗಳ ಹೋಲಿಕೆ  

ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಯಾವ ಸೈನಿಕ ಸ್ವಂತ ಖರ್ಚಿನಿಂದ ಸಮರಕ್ಕೆ ನಿಲ್ಲುತ್ತಾನೆ? ಯಾವ ತೋಟಗಾರ ತನ್ನ ಸ್ವಂತ ದ್ರಾಕ್ಷಿಯ ತೋಟದಿಂದ ದ್ರಾಕ್ಷಿಯ ಫಲವನ್ನು ತಿನ್ನದಿರುತ್ತಾನೆ? ಯಾವ ಗೌಳಿಗ ತಾನು ಸಾಕಿದ ಹಸುವಿನ ಹಾಲನ್ನು ಕುಡಿಯದಿರುತ್ತಾನೆ?


ದೂರದಲ್ಲಿ ಎಲೆ ತುಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೇನಾದರೂ ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಿಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ.


ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.


ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.


ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,


ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.


“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.


ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.


ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.


ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


ಹದಮಾಡಿದೆ ಅದಕೆ ಬೇಕಾದ ನೆಲವನ್ನೆಲ್ಲಾ I ಬೇರೂರಿ ಹಬ್ಬಿಕೊಂಡಿತದು ನಾಡಿನಲ್ಲೆಲ್ಲಾ II


“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು