Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:21 - ಕನ್ನಡ ಸತ್ಯವೇದವು C.L. Bible (BSI)

21 ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಯ್ಯೋ, ತಮ್ಮಲ್ಲಿ ತಾವೇ ಜ್ಞಾನಿಗಳೆಂದೂ ಸ್ವಂತ ಗಣನೆಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಪಾಡು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ತಾವು ತುಂಬಾ ಬುದ್ಧಿವಂತರೆಂದೂ ಜ್ಞಾನಿಗಳೆಂದೂ ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:21
13 ತಿಳಿವುಗಳ ಹೋಲಿಕೆ  

ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.


ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.


ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ.


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಕಾಡುಕತ್ತೆಮರಿ ನರಜನ್ಮ ತಾಳಿದಾಗ ಪೆದ್ದ ಮಾನವ ಬುದ್ಧಿವಂತನಾದ!


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು