Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:24 - ಕನ್ನಡ ಸತ್ಯವೇದವು C.L. Bible (BSI)

24 ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಅವರಿಗೆ ಕೇಡುಗಳಾಗುವವು. ಅವರ ಸಂತತಿಯವರು ತರಗೆಲೆಯೂ ಹುಲ್ಲೂ ಬೆಂಕಿಯಲ್ಲಿ ಸುಟ್ಟುಹೋಗುವಂತೆ ನಾಶವಾಗುವರು. ಅವರ ಸಂತತಿಯವರು ಸತ್ತು ಧೂಳಾಗುವ ಬೇರಿನಂತೆ ನಾಶವಾಗುವರು. ಬೆಂಕಿಯಲ್ಲಿ ಸುಟ್ಟುಹೋದ ಹೂವಿನ ಬೂದಿಯು ಗಾಳಿಯಲ್ಲಿ ಹಾರಿಹೋಗುವಂತೆ ಅವರ ಸಂತತಿಯವರು ನಾಶವಾಗುವರು. ಅವರು ಸರ್ವಶಕ್ತನಾದ ಯೆಹೋವನ ಬೋಧನೆಗಳನ್ನು ಅನುಸರಿಸಲು ನಿರಾಕರಿಸಿದ್ದಾರೆ. ಇಸ್ರೇಲಿನ ಪರಿಶುದ್ಧನ ವಾಕ್ಯವನ್ನು ಅವರು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:24
44 ತಿಳಿವುಗಳ ಹೋಲಿಕೆ  

ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ : “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ.


ಒಣಗುವುದು ಅವನ ಬುಡ ಕೆಳಗಡೆ ಬಾಡುವುದು ಅವನ ರೆಂಬೆ ಮೇಲ್ಗಡೆ.


ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.


ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.


ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ನಿನ್ನೆದುರಾಳಿಗಳನು ಕೆಡವಿಬಿಡುತಿ ಮಹಾ ತೇಜಸ್ವಿಯಾಗಿ ಒಣಹುಲ್ಲಂತೆ ಭಸ್ಮಮಾಡುತಿ ಅವರನು ಕೋಪಾಗ್ನಿಯಾಗಿ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ನಾನು ಎಫ್ರಯಿಮಿಗೆ ನುಸಿಯಾಗಿದ್ದೇನೆ; ಯೆಹೂದ ಕುಲಕ್ಕೆ ಕುಟ್ಟೆಯಾಗಿದ್ದೇನೆ.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.


ಆ ಜನರು ಈಜಿಪ್ಟ್ ದೇಶದಲ್ಲೆಲ್ಲಾ ಸುತ್ತಿ, ಹುಲ್ಲು ಸಿಕ್ಕದೆ ಕೂಳೆಕಿತ್ತು ಕೂಡಿಸಿದರು.


ನಿಮ್ಮ ನಾಡಿನ ಮೇಲೆ ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ಸರ್ವೇಶ್ವರ ಸುರಿಸುವರು; ಇದರಿಂದ ನೀವು ನಾಶವಾಗಿ ಹೋಗುವಿರಿ.


ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು;


ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು