Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:25 - ಕನ್ನಡ ಸತ್ಯವೇದವು C.L. Bible (BSI)

25 ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:25
60 ತಿಳಿವುಗಳ ಹೋಲಿಕೆ  

ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II


ನಡುಗಿತು ಪೊಡವಿ, ಕಂಪಿಸಿತು ಸೀನಾಯಿ, ದೇವ ಪ್ರತ್ಯಕ್ಷನಾದನೆಂದು I ಮಳೆಗರೆಯಿತು ಮೋಡಗಿರಿ, ಇಸ್ರಯೇಲ್ ದೇವ ಪ್ರತ್ಯಕ್ಷನಾದನೆಂದು II


ಆದುದರಿಂದ ಸರ್ವೇಶ್ವರಸ್ವಾಮಿ ಇಸ್ರಯೇಲರ ಮೇಲೆ ಕೋಪಗೊಂಡು, ಅವರನ್ನು ಸಿರಿಯಾದವರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದರು. ಇಸ್ರಯೇಲರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಸಿರಿಯಾದವರ ಕೈಕೆಳಗಿದ್ದರು.


ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು.


ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳು ಹಾಗು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವುವು".


ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


ಈಜುವವರು ಕೈಯಾಡಿಸುವಂತೆ ಮೋವಾಬ್ ರೊಚ್ಚಿನಲ್ಲಿ ಕೈಯಾಡಿಸುವುದು. ಅದರ ಗರ್ವವನ್ನೂ ಕೈಚಳಕವನ್ನೂ ಸರ್ವೇಶ್ವರ ಸ್ವಾಮಿ ಅಡಗಿಸಿಬಿಡುವರು.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.


ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.


ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು.


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


ಸ್ವಾಮಿಯು ರೆಚೀನನ ಶತ್ರುಗಳನ್ನು ಅವರ ವಿರುದ್ಧವಾಗಿ ಎತ್ತಿಕಟ್ಟಿರುವರು. ಅವರ ಮುಂದೆ ಸೀರಿಯರನ್ನು, ಅವರ ಹಿಂದೆ ಫಿಲಿಷ್ಟಿಯರನ್ನು - ಹೀಗೆ ಎಲ್ಲಾ ಶತ್ರುಗಳನ್ನು ಎಬ್ಬಿಸಿರುವರು.


ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.


ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.


ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು