Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:26 - ಕನ್ನಡ ಸತ್ಯವೇದವು C.L. Bible (BSI)

26 ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ ಅವರನ್ನು ಭೂಲೋಕದ ಅಂಚಿನಲ್ಲಿಂದ ಸಿಳ್ಳುಹಾಕಿ ಕರೆಯುವನು; ಇಗೋ, ತ್ವರೆಪಟ್ಟು ವೇಗವಾಗಿ ಬರುತ್ತಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎದ್ದು ನೋಡು! ದೂರದೇಶದ ಜನಾಂಗಗಳಿಗೆ ದೇವರು ಗುರುತನ್ನು ಕೊಡುತ್ತಿದ್ದಾನೆ. ಆತನು ಧ್ವಜವನ್ನೆತ್ತಿ ಆ ಜನರನ್ನು ಸಿಳ್ಳುಹಾಕಿ ಕರೆಯುತ್ತಿದ್ದಾನೆ. ಶತ್ರುಗಳು ದೂರದೇಶದಿಂದ ಬರುತ್ತಿದ್ದಾರೆ. ಅವರು ಬೇಗನೆ ನಿನ್ನ ದೇಶವನ್ನು ಪ್ರವೇಶಿಸುವರು. ಅವರು ಬಹುವೇಗವಾಗಿ ಬರುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:26
23 ತಿಳಿವುಗಳ ಹೋಲಿಕೆ  

“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.


ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು.


ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ : ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ಅವು ಶೂರರಂತೆ ಹೋರಾಡುತ್ತವೆ, ಯೋಧರಂತೆ ಗೋಡೆಗಳನ್ನೇರುತ್ತವೆ, ಸಾಲುಸಾಲಾಗಿ ನಡೆದು, ಕ್ರಮತಪ್ಪದೆ ಸಾಗುತ್ತವೆ.


ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು : “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ದೂತರು ಎಲ್ಲಿಯವರು? ಏನು ಕೇಳಿದರು?” ಎಂದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ನಾಡಾದ ಬಾಬಿಲೋನಿಯದಿಂದ ಬಂದವರು,” ಎಂದು ಉತ್ತರಕೊಟ್ಟನು.


ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಪರಾಜಯ ಪತಾಕೆಯ ಹರಿಸಿದೆ ನಿನಗಂಜಿ ನಡೆದವರಿಗೆ I ಅವರು ಹೆದರಿ ಓಡುವಂತೆ ಮಾಡಿದೆ ಬಿಲ್ಲು ಬಾಣಗಳಿಗೆ II


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.


ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನನ್ನ ದಾಸರಾದ ಇಸ್ರಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಯೇಲರ ಮೇಲೆ ಬೀಳಮಾಡುವೆನು, ಎಂದು ಮುಂತಿಳಿಸಿದ್ದರು; ನಾನು ಅವರ ಮುಖಾಂತರ ಮುಂತಿಳಿಸಿದವನು ನೀನೇ ಅಲ್ಲವೇ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು