Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:27 - ಕನ್ನಡ ಸತ್ಯವೇದವು C.L. Bible (BSI)

27 ಬಳಲಿ ಹೋಗರು ಅವರಲ್ಲಿ ಯಾರೂ ಮುಗ್ಗರಿಸಿ, ನಿದ್ರಿಸರು ಯಾರೂ ತೂಕಡಿಸಿ, ಸಡಿಲವಾಗದವರ ನಡುಕಟ್ಟು, ಕಿತ್ತುಹೋಗದವರ ಕೆರದ ಕಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರಲ್ಲಿ ಯಾರೂ ಬಳಲಿ ಮುಗ್ಗರಿಸರು, ಯಾರೂ ತೂಕಡಿಸಿ ನಿದ್ರಿಸರು; ಅವರ ನಡುಕಟ್ಟು ಬಿಚ್ಚಿಲ್ಲ, ಅವರ ಕೆರದ ಬಾರು ಕಿತ್ತಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಶತ್ರುಗಳು ಆಯಾಸಗೊಳ್ಳುವುದಿಲ್ಲ, ನೆಲಕ್ಕೆ ಬೀಳುವುದಿಲ್ಲ. ಅವರು ತೂಕಡಿಸುವುದಿಲ್ಲ, ನಿದ್ರೆ ಮಾಡುವುದಿಲ್ಲ. ಅವರ ಸೊಂಟಪಟ್ಟಿಯು ಆಯುಧದೊಂದಿಗೆ ಯಾವಾಗಲೂ ಸಿದ್ಧವಾಗಿರುವುದು. ಅವರ ಪಾದರಕ್ಷೆಗಳ ದಾರವು ಎಂದಿಗೂ ತುಂಡಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರಲ್ಲಿ ಯಾರೂ ದಣಿದು ಮುಗ್ಗರಿಸರು, ಅವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ, ಅವರ ನಡುಕಟ್ಟು ಬಿಚ್ಚಿಕೊಳ್ಳುವುದಿಲ್ಲ. ಕೆರದ ಬಾರು ಹರಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:27
14 ತಿಳಿವುಗಳ ಹೋಲಿಕೆ  

ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ.


ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.


ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II


“ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.


ಹೀಗೆ ನೀನು ಎಡವದೆ ನಡೆಯುವೆ, ನಿನ್ನ ಮಾರ್ಗದೊಳು ಭಯವಿಲ್ಲದೆ ಸಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು