Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:28 - ಕನ್ನಡ ಸತ್ಯವೇದವು C.L. Bible (BSI)

28 ಚೂಪಾಗಿವೆ ಅವರ ಬಾಣಗಳು; ಬಿಗಿದಿವೆ ಬಿಲ್ಲುಗಳು, ಬೆಣಚುಕಲ್ಲಿನಂತಿವೆ ಕುದುರೆಗಳ ಗೊರಸುಗಳು, ಸುತ್ತುತ್ತಿವೆ ಸುಂಟರಗಾಳಿಯಂತವರ ಚಕ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರ ಅಂಬುಗಳು ಮೊನೆಯಾಗಿವೆ, ಬಿಲ್ಲುಗಳು ಬಿಗಿದಿವೆ; ಕುದುರೆಗಳ ಗೊರಸೆಗಳು ಕಲ್ಲಿನಂತಿವೆ; ಚಕ್ರಗಳು ಬಿರುಗಾಳಿಯಂತೆ ರಭಸವಾಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಅವರ ರಥಗಳ ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:28
17 ತಿಳಿವುಗಳ ಹೋಲಿಕೆ  

ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II


ಕೇಳಿ, ಚಕ್ರಗಳ‍ ಚೀತ್ಕಾರ, ಚಾಟಿಗಳ ಚಟಪಟ; ಕುದುರೆಗಳ ಭರದೌಡು, ರಥಗಳ ಹಾರಾಟ.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.


ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು,


ಕಡಲಡವಿಯ ಕುರಿತು ದೈವೋಕ್ತಿ : ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.


ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II


ನೆಲ ಕಂಪಿಸಿತು ಕುದುರೆಗಳ ಭರದೌಡಿನಿಂದ ಸುತ್ತಿಗೆಯಂತಹ ಆ ಕಾಲುಗಳ ಪೆಟ್ಟಿನಿಂದ


ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡಹುವನು.


ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು