Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:30 - ಕನ್ನಡ ಸತ್ಯವೇದವು C.L. Bible (BSI)

30 ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಸಮುದ್ರವು ಭೋರ್ಗರೆಯವಂತೆ ಆ ದಿನದಲ್ಲಿ ಗರ್ಜನೆಯಿರುವುದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:30
24 ತಿಳಿವುಗಳ ಹೋಲಿಕೆ  

ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


ಆತ ನನ್ನನ್ನು ಕರೆದೊಯ್ದು ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಸಿದ.


ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.


ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು;


ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.


ಸಮುದ್ರದಂತೆ ಭೋರ್ಗರೆಯುವ, ಪ್ರಚಂಡ ಜನಪ್ರವಾಹಗಳಂತೆ ಗರ್ಜಿಸುವ ಪ್ರಬಲ ರಾಷ್ಟ್ರಗಳ ಆರ್ಭಟವನ್ನು ಕೇಳಿ.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.


ಆದುದರಿಂದ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಟೈರೇ, ಇಗೋ ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ವಿರುದ್ಧ ಎಬ್ಬಿಸುವೆನು.


ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು