ಯೆಶಾಯ 5:6 - ಕನ್ನಡ ಸತ್ಯವೇದವು C.L. Bible (BSI)6 ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದನ್ನು ಹಾಳುಮಾಡುವೆನು, ಯಾರೂ ಕುಡಿಕತ್ತರಿಸಿ ಅಗತೆಮಾಡುವದಿಲ್ಲ; ಅದರಲ್ಲಿ ಮುಳ್ಳುಗಿಳ್ಳು ಬೆಳೆದುಹೋಗುವದು; ಮತ್ತು ಅದರ ಮೇಲೆ ಮಳೆಸುರಿಸಬಾರದೆಂದು ಮೇಘಗಳಿಗೆ ಅಪ್ಪಣೆಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.” ಅಧ್ಯಾಯವನ್ನು ನೋಡಿ |